Mysore
22
overcast clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

H D ಕೋಟೆ ತಾಲ್ಲೂಕಿನಾದ್ಯಂತ ಡೆಂಗ್ಯೂ ಸಮೀಕ್ಷೆ

ಮೈಸೂರು : ಹೆಚ್‌ ಡಿ ಕೋಟೆ ತಾಲ್ಲೂಕಿನಾದ್ಯಂತ ಇಂದು ಹಲವಾರು ಗ್ರಾಮಗಳಲ್ಲಿ  ತಾಲ್ಲೂಕಿನ ಆರೋಗ್ಯ ಅಧಿಕಾರಿ  ಡಾ. ಟಿ ರವಿಕುಮಾರ್‌ ಹಾಗೂ ತಂಡದವರು ಲಾರ್ವ ಸಮೀಕ್ಷೆಯನ್ನು ಅಡ್ದ ಪರಿಶೀಲನೆ ನಡೆಸಿದರು.

ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ .ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರಿಂದ ಪ್ರತಿ ಶುಕ್ರವಾರ,ಮತ್ತು ಪ್ರತಿ ಮಂಗಳವಾರ ಹೆಚ್.ಡಿ. ಕೋಟೆ ಮತ್ತು ಹ್ಯಾಂಡ್ ಪೋಸ್ಟ್ ಟೌನ್ ನಲ್ಲಿ ಲಾರ್ವ ಸಮೀಕ್ಷೆಯನ್ನು ಮಾಡುತ್ತಾರೆ, ಇದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟಬಹುದು ಮತ್ತು ಸೊಳ್ಳೆಯಿಂದ ಹರಡುವ ಜ್ವರಗಳ ಬಗ್ಗೆ ಜನರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತದೆ, ಡೆಂಗ್ಯೂ ಮತ್ತು ಚಿಕುಂಗುನ್ಯಾ ಕಾಯಿಲೆ, ಈ ಜ್ವರ ಸೋಂಕು ಹೊಂದಿದ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಯು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಈ ರೋಗದ ಮುಖ್ಯಲಕ್ಷಣಗಳು ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗುಡ್ಡೆ ಹಿಂಭಾಗದಲ್ಲಿ ವಿಪರೀತ ನೋವು ,ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು, ಮತ್ತು ವಸಡುಗಳಲ್ಲಿ ರಕ್ತ ಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವ ಕಾಣಿಸಿಕೊಳ್ಳುತ್ತದೆ. ಇದು ಡೆಂಗ್ಯೂ ರಕ್ತಸ್ರಾವ ಜ್ವರ ಹಾಗೂ ಡೆಂಗ್ಯೂ ಆಘಾತಕರ ಆದ್ದರಿಂದ ಇದು ಮಾರಣಾಂತಿಕವಾಗಬಹುದು.ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು,ಇಡೀ ಸೊಳ್ಳೆಗಳ ನಿಯಂತ್ರಣ ಡೆಂಗು ರೋಗದ ಹತೋಟಿಗೆ ಮುಖ್ಯ ವಿಧಾನ ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಅಂದರೆ ಮನೆಯ ಒಳಗೆ ಹಾಗೂ ಹೊರಗೆ ನೀರನ್ನು ಶೇಖರಿಸುವ ತೊಟ್ಟಿ ಮಣ್ಣಿನ ಮಡಿಕೆ ಉಪಯೋಗಿಸಿದ ಒರಳು ಕಲ್ಲುಗಳು, ಹೂವಿನ ಕುಂಡಗಳು, ತಟ್ಟೆಗಳು, ಬಳಸದ ಟೈರುಗಳು, ಎಳನೀರು ಚಿಪ್ಪುಗಳು, ಒಡೆದ ಬಾಟಲ್ ಗಳು, ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸಬೇಕು ಎಂದು ಮಾಹಿತಿ ನೀಡಿದರು.

ಮುಂದುವರಿದು ಮುಂಜಾಗ್ರತಾ ಕ್ರಮಗಳು. ಎಲ್ಲ ನೀರಿನ ತೊಟ್ಟಿಗಳು, ಡ್ರಮ್ ಗಳ, ಬ್ಯಾರೆಲ್ ಗಳು, ಏರ್ ಕೂಲರ್, ತೊಟ್ಟಿ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಉಜ್ಜಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು.
ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಟೈರು, ಎಳನೀರಿನ ಚಿಪ್ಪು, ಮರದ ಪೊಟರೆ, ಒಡೆದ ಬಾಟಲಿ, ಕುಡಿದು ಬಿಸಾಡಿದ ಪ್ಲಾಸ್ಟಿಕ್ ಲೋಟ, ಬಾಟಲ್ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು ಸೂಕ್ತ ವಿಲೇವಾರಿ ಮಾಡುವುದು. ಸ್ವಯಂ ರಕ್ಷಣಾ ವಿಧಾನಗಳಾದ. ಸೊಳ್ಳೆ ಪರದೆ ಬಳಸುವುದು. ಮೈ ತುಂಬಾ ಬಟ್ಟೆ ಧರಿಸುವುದು.
ಆರೋಗ್ಯ ಇಲಾಖೆ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡುವುದು.ಎಂದು ತಿಳಿಸಿದರು.
ಈ ಸಂದರ್ಭದಲ್ಲಿ  ತಾಲ್ಲೂಕು ಆರೋಗ್ಯಾಧಿಕಾರಿಗಳಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿ ಕಾರಿ ನಾಗೇಂದ್ರ.ರವಿರಾಜ್.ಹನುಮಂತ.ಅಶೋಕ. ಸಮುದಾಯ ಆರೋಗ್ಯ ಅಧಿಕಾರಿಗಳಾದ ಸುಷ್ಮಾ ನಾಗಮ್ಮ, ಪ್ರತಾಪ್ ಆಶಾ ಕಾರ್ಯಕರ್ತೆಯರು, ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ