Mysore
22
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಹನೂರು: 5 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ : ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ

ಹನೂರು: ಶಾಸಕರ ಪ್ರದೇಶ ಅಭಿವೃದ್ಧಿ ಯೋಜನೆಯಡಿ 5 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ತಾಲೂಕಿನ ಮಲೆ ಮಾದೇಶ್ವರ ಬೆಟ್ಟದ ಸಾಲೂರು ಮಠದ ಮುಂಭಾಗ ರಂಗ ಮಂದಿರ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮಠದ ವತಿಯಿಂದ ಹಾಗೂ ಶಿಕ್ಷಣ ಸಂಸ್ಥೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದ ಸಂದರ್ಭದಲ್ಲಿ ಮಠದ ಮುಂಭಾಗ ಕಾರ್ಯಕ್ರಮಗಳನ್ನು ಮಾಡಬೇಕಾಗಿತ್ತು.ಈ ವೇಳೆ ಶಾಸಕ ಆರ್ ನರೇಂದ್ರ ರವರಿಗೆ ರಂಗಮಂದಿರಕ್ಕೆ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.ಮನವಿಗೆ ಸ್ಪಂದಿಸಿದ ಶಾಸಕರು 5 ಲಕ್ಷ ಅನುದಾನ ನೀಡಿದ್ದಾರೆ. ನೂತನವಾಗಿ ನಿರ್ಮಾಣವಾಗುವ ರಂಗಮಂದಿರದಿಂದ ಭಕ್ತಾದಿಗಳು ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ ಶಾಸಕ : ರಂಗ ಮಂದಿರ ಭೂಮಿ ಪೂಜೆಗೆ ತೆರಳಿದ್ದ ಶಾಸಕ ಆರ್ ನರೇಂದ್ರ ಸಾಲೂರು ಬೃಹನ್ ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳವರ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕ ಆರ್ ನರೇಂದ್ರ, ಮುಡಿಗುಂಡ ಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರಸ್ವಾಮೀಜಿ, ಹೊಂಡರಬಾಳು ಮಠದ ನೀಲಕಂಠ ಸ್ವಾಮಿ, ಗುಂಡೆಗಾಲದ ಮಲ್ಲಿಕಾರ್ಜುನ್ ಸ್ವಾಮೀಜಿ, ಅಗರ ಸಿದ್ದಮಲ್ಲ ಸ್ವಾಮೀಜಿ, ಬರಡನಪುರ ಪರಶಿವಮೂರ್ತಿಸ್ವಾಮೀಜಿ, ಗ್ರಾಪಂ ಅಧ್ಯಕ್ಷ ಕುಮಾರ್ ಮುಖಂಡರುಗಳಾದ ಮುರುಗೇಶ್, ಪೊನ್ನಚಿ ಮಹದೇವಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!