Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

KGF ತಾತ ಆಸ್ಪತ್ರೆಗೆ ದಾಖಲು, ICUನಲ್ಲಿ ಚಿಕಿತ್ಸೆ

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಸ್ಯಾಂಡಲ್​​ವುಡ್ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರು ಸದ್ಯ ಐಸಿಯುವಿನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್ ಹಾಗು ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ನಟಿಸಿ ದೊಡ್ಡ ಹೆಸರು ಮಾಡಿದ್ದ ಇವರು ಬೆಂಗಳೂರಿನ  ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಬಂಧಿಕರ ಮನೆಗೆ ಹೋಗಿದ್ದ ಕೃಷ್ಣ ಜಿ ರಾವ್ ಅವರನ್ನು ಸುಸ್ತಾದ ಕಾರಣ ಮಧ್ಯರಾತ್ರಿ ಆಸ್ಪತ್ರೆಗೆ ‌ದಾಖಲು ಮಾಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಕೃಷ್ಣ ಜಿ ರಾವ್ ಅವರು ಶೀಘ್ರ ಚೇತರಿಸಲಿ ಎಂದು ಪ್ರಾರ್ಥಿಸಿದ್ದಾರೆ.
ರೊಮ್ಯಾಂಟಿಕ್ ಕಾಮಿಡಿಯಲ್ಲಿ ಪ್ರಮುಖ ಪಾತ್ರವನ್ನು ಮಾಡುವ ಮೂಲಕ ನ್ಯಾನೋ ನಾರಾಯಣಪ್ಪ ಸಿನಿಮಾದಲ್ಲಿ ಅವರು ತಮ್ಮ ಜೀವಿತಾವಧಿಯ ಮಹತ್ವಾಕಾಂಕ್ಷೆಯನ್ನು ಸಾಕಾರಗೊಳಿಸಿಕೊಂಡಿದ್ದಾರೆ. ನಾನು ನನ್ನ ಗುರು ಎಂದು ಗೌರವಿಸುವ ಶಂಕರ್ ನಾಗ್ ಅವರ ಬಳಿ ಕೆಲಸ ಮಾಡುವ ಅವಕಾಶ ಸಿಕ್ಕಿತು. ನಾನು ಕನ್ನಡ ಸಿನಿಮಾಗಳಲ್ಲಿ ಸಣ್ಣ ಪಾತ್ರಗಳಲ್ಲಿ ನಟಿಸುತ್ತಿದ್ದೇನೆ. ಆದರೆ ಕೆಜಿಎಫ್ ನನಗೆ ಖ್ಯಾತಿ ತಂದುಕೊಟ್ಟಿತು ಎಂದಿದ್ದರು ನಟ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!