Mysore
24
light rain

Social Media

ಗುರುವಾರ, 21 ಮೇ 2026
Light
Dark

ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 4,597ಕ್ಕೆ ಇಳಿಕೆ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-೧೯ ದೃಢಪಟ್ಟ ೨೫೩ ಹೊಸ ಪ್ರಕರಣಗಳು ಕಳೆದ ೨೪ ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.
ಸಚಿವಾಲಯ ಶನಿವಾರ ಬೆಳಿಗ್ಗೆ ೮ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಅಲ್ಪ (೭೫) ಇಳಿಕೆ ಕಂಡುಬಂದಿದೆ. ಸದ್ಯ ೪,೫೯೭ ಪ್ರಕರಣಗಳು ದೇಶದಲ್ಲಿ ಸಕ್ರಿಯವಾಗಿವೆ. ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ ೦.೦೧ ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ ೯೮.೮೦ ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ. ಇದುವರೆಗೆ ೨೧೯.೯೩ ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!