Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಹನೂರು: ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿರುವ ಗ್ರಾಮ ಲೆಕ್ಕಿಗರು

ಹನೂರು : ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ವೃಂದದ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಸರ್ಕಾರ ಆದೇಶ ಮಾಡಿರುವುದಕ್ಕೆ ಹನೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿ ಸಂಘದ ಅಧ್ಯಕ್ಷ ರಾಜು ಅಭಿನಂದನೆ ಸಲ್ಲಿಸಿದ್ದಾರೆ.

ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಓ ರವರು ಹೇಗೆ ಆಡಳಿತ ನಡೆಸುತ್ತಾರೋ,ಅದೇ ಮಾದರಿಯಲ್ಲಿ ಗ್ರಾಮ ಲೆಕ್ಕಿಗರು ಇನ್ನು ಮುಂದೆ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಇದುವರೆಗೆ ದಕ್ಷಿಣ ರಾಜ್ಯಗಳಾದ ಕೇರಳ ಹಾಗೂ ತಮಿಳುನಾಡುಗಳಲ್ಲಿ ಈ ಹಿಂದೆ ಗ್ರಾಮ ಲೆಕ್ಕಿಗರ ಬದಲಾಗಿ ಗ್ರಾಮ ಆಡಳಿತ ಅಧಿಕಾರಿ ವೃಂದದ ಹುದ್ದೆ ಚಾಲ್ತಿಯಲ್ಲಿತ್ತು, ಅದರಂತೆ ಕರ್ನಾಟಕದಲ್ಲಿಯೂ ಹುದ್ದೆಯನ್ನು ಬದಲಾಯಿಸುವಂತೆ ರಾಜ್ಯದ ಎಲ್ಲಾ ಗ್ರಾಮ ಲೆಕ್ಕಿಗರ ಸಂಘ ಹಾಗೂ ಪದಾಧಿಕಾರಿಗಳು ಕಂದಾಯ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ ಕಂದಾಯ ಇಲಾಖೆ ಸಚಿವರು ಗ್ರಾಮ ಲೆಕ್ಕೀಗ ಪದ ನಾಮವನ್ನು ಗ್ರಾಮ ಆಡಳಿತ ಅಧಿಕಾರಿಯನ್ನು ಪರಿಶೀಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಅಭಿಪ್ರಾಯ ನೀಡುವಂತೆ ಕೋರಿದ್ದರು. ಅದರಂತೆ ನಾಲ್ಕು ಪ್ರಾದೇಶಿಕ ಆಯುಕ್ತರು ಗ್ರಾಮ ಲೆಕ್ಕಿಗರು ಎಂಬ ಪಧನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾಯಿಸಬಹುದೆಂದು ವರದಿ ಸಲ್ಲಿಸಿರುತ್ತಾರೆ. ಪ್ರಾದೇಶಿಕ ಆಯುಕ್ತರ ವರದಿಯಂತೆ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಹರೀಶ್ ರವರು ಇಂದು ನೂತನ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡುಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳಿಗೆ ವಿಶೇಷ ಭತ್ಯ ನೀಡಲಾಗುತ್ತಿದೆ. ಕರ್ನಾಟಕ ಸರ್ಕಾರ ಗ್ರಾಮ ಲೆಕ್ಕಿಗ ಬದಲಾಗಿ ಗ್ರಾಮ ಆಡಳಿತ ಅಧಿಕಾರಿ ನೇಮಕ ಮಾಡಿರುವುದು ಸಂತಸದ ವಿಚಾರ ದಕ್ಷಿಣ ರಾಜ್ಯಗಳಲ್ಲಿ ನೀಡುತ್ತಿರುವ ವಿಶೇಷ ಭತ್ಯ ಗಳನ್ನು ನಮ್ಮ ರಾಜ್ಯದಲ್ಲಿಯೂ ನೀಡುವಂತೆ ಮನವಿ ಮಾಡಿದ್ದಾರೆ.

ನೂತನ ಆದೇಶಕ್ಕೆ ಹನೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿ ಸಂಘದ ಪದಾಧಿಕಾರಿಗಳಾದ ವಿನೋದ್, ಶೇಷಣ್ಣ,ಕಾರ್ತಿಕ್, ಪುನೀತ್, ಕುಮಾರ್,ಮಾರುತಿ, ರಮೇಶ್, ಮಹದೇವ ಪ್ರಸಾದ್ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ