Mysore
21
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಟೀಂ ಇಂಡಿಯಾ- ಬಾಂಗ್ಲಾ ನಡುವೆ ಇಂದು 2ನೇ ಏಕದಿನ ಪಂದ್ಯ: ಭಾರತಕ್ಕೆ ಗೆಲ್ಲಲೇಬೇಕಾದ ಅನಿವಾರ್ಯತೆ 

ಢಾಕಾ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಬುಧವಾರ ಢಾಕಾದಲ್ಲಿ ನಡೆಯಲಿದೆ.

ಢಾಕಾದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ

ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ 11:30ಕ್ಕೆ ಆರಂಭವಾಗಲಿದೆ. 11 ಗಂಟೆಗೆ ಟಾಸ್​ ಹಾಕಲಾಗುವುದು.

ಈ ಪಂದ್ಯವನ್ನು ಸೋನಿ ನೆಟ್‌ವರ್ಕ್ ನೇರ ಪ್ರಸಾರ ಮಾಡಲಿದೆ. ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ಲೈವ್ ಆಗಿ ವೀಕ್ಷಿಸಬಹುದು. ಜತೆಗೆ ಡಿಡಿ ಸ್ಪೋರ್ಟ್ಸ್ ಕೂಡ ಈ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ.

ಭಾರತ ತಂಡಕ್ಕೆ ಈ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು, ವಿಜಯ ಸಾಧಿಸಿದರೇ ಮಾತ್ರ ಸರಣಿಯಲ್ಲಿ ಸಮಬಲ ಸಾಧಿಸಿದಂತಾಗುತ್ತದೆ. ಇಲ್ಲದಿದ್ದರೇ ಬಾಂಗ್ಲಾ ಸರಣಿ ಗೆದ್ದಂತಾಗುತ್ತದೆ.

2023ರ ವಿಶ್ವಕಪ್‌ಗಾಗಿ ಬಾಂಗ್ಲಾದೇಶ ವಿರುದ್ಧದ ಈ ಸರಣಿಯು ಟೀಂ ಇಂಡಿಯಾಗೆ ಮಹತ್ವದ್ದಾಗಿದೆ.

ವಿಶ್ವಕಪ್‌ಗೆ ಆತಿಥ್ಯ ವಹಿಸಲಿರುವ ಭಾರತವು ಈಗಾಗಲೇ ಏಕದಿನ ವಿಶ್ವಕಪ್ ಸೂಪರ್ ಲೀಗ್‌ಗೆ ಅರ್ಹತೆ ಪಡೆದಿದೆ.

  ಪಿಚ್​ ಹೇಗಿದೆ ? 

ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಐದು ಏಕದಿನ ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಮೊತ್ತ 212 ರನ್ ಆಗಿದೆ. ಮೊದಲು ಬ್ಯಾಟ್ ಮಾಡಿರುವ ತಂಡ ಮೂರು ಪಂದ್ಯಗಳನ್ನು ಗೆದ್ದಿದೆ. ಸ್ಪಿನ್ನರ್‌ಗಳು ಈ ಪಿಚ್ ನಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಆದ್ದರಿಂದ ಟಾಸ್​ ಗೆಲ್ಲುವ ತಂಡದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಳ್ಳುವ ಸಂಭವವಿದೆ.

ತಂಡದಲ್ಲಿ ಬದಲಾವಣೆ ಸಾಧ್ಯತೆ:

ಸರಣಿಯಲ್ಲಿ ಟೀಂ ಇಂಡಿಯಾ ಜೀವಂತವಾಗಿರಲು ಈ ಪಂದ್ಯವನ್ನು ಗೆಲ್ಲಲೇ ಬೇಕಿದೆ. ಆದ್ದರಿಂದ ಮೊದಲ ಪಂದ್ಯದಲ್ಲಿ ಆಡಿದ ಕೆಲ ಆಟಗಾರರನ್ನು ಬದಲಿಸುವ ಸಾಧ್ಯತೆ ಇದೆ. ಉಮ್ರಾನ್ ಮಲಿಕ್​ ಅವರಿಗೆ ಅವಕಾಶ ಸಿಗುವ ಸಂಭವವಿದೆ. ವೇಗದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲಬರಲಿದೆ.

ಹವಾಮಾನ ಹೇಗಿದೆ ?

ಈ ಪಂದ್ಯದ ವೇಳೆ ಮಳೆಯ ಮುನ್ಸೂಚನೆ ಇಲ್ಲ. ಮೀರ್‌ಪುರದಲ್ಲಿ ತಂಪಾದ ವಾತಾವರಣ ಇದೆ. ಆದ್ದರಿಂದ ಸಂಜೆಯ ವೇಳೆಗೆ ಇಬ್ಬನಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

 ಸಂಭಾವ್ಯ ತಂಡ 11:

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ದೀಪಕ್ ಚಹಾರ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಕುಲ್ದೀಪ್ ಸೇನ್.

ಬಾಂಗ್ಲಾದೇಶ :

ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾಯಕ), ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಹಸನ್ ಮಹಮೂದ್, ಎಬಾಡೋತ್ ಹೊಸೈನ್, ಮುಸ್ತಫಿಜುರ್ ರೆಹಮಾನ್.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!