Mysore
21
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಹೆಲ್ಮೆಟ್ ಧರಿಸದಿದ್ದಲ್ಲಿ ಅಮಾನತು:ಪೊಲೀಸ್‌ ಸಿಬ್ಬಂದಿಗೆ ಹಾಸನ ಎಸ್ಪಿ ಎಚ್ಚರಿಕೆ

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಸಂಚಾರ ನಿಯಮ ಪಾಲಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಪೊಲೀಸರೇ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುತ್ತಿರುವ ಬಗ್ಗೆ ವ್ಯಾಪಕ ದೂರು ಕೇಳಿಬಂದಿದೆ ಎಂದಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೊರಡಿಸಿರುವ ಸುತ್ತೋಲೆ

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ದ್ವಿಚಕ್ರ ವಾಹನ ಚಲಿಸುವಾಗ ಹೆಲ್ಮೆಟ್ ಧರಿಸದೇ ಇರುವುದು ಕಂಡುಬಂದಲ್ಲಿ ಸಂಚಾರ ನಿಯಮದ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ತಿಳಿಸಿದ್ದಾರೆ.

Helmet
Hassan
Police
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ