Mysore
21
scattered clouds

Social Media

ಸೋಮವಾರ, 22 ಜೂನ್ 2026
Light
Dark

ಕ್ರೀಡಾಕೂಟ: ಕುಲ್ಲೇಟಿರ ಅಜಿತ್ ನಾಣಯ್ಯ ಚಾಂಪಿಯನ್

ಮಡಿಕೇರಿ: ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ರೋಟರಿ ಕ್ರೀಡಾಕೂಟದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ಸದಸ್ಯ ಕುಲ್ಲೇಟಿರ ಅಜಿತ್ ನಾಣಯ್ಯ ಅತೀ ಹೆಚ್ಚು ಚಿನ್ನದ ಪದಕ ತಮ್ಮದಾಗಿಸಿಕೊಳ್ಳುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದರು.
ಓಟದ ಸ್ಪರ್ಧೆ ೧೦೦ ಮೀ. ಪ್ರಥಮ, ೨೦೦ ಮೀ. ಪ್ರಥಮ, ೪೦೦ ಮೀ. ನಡಿಗೆ ಪ್ರಥಮ, ಬಾರದ ಗುಂಡು ಎಸೆತ ಪ್ರಥಮ ಹಾಗೂ ಡಿಸ್ಕಸ್ ಥ್ರೋನಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ವೈಯಕ್ತಿಕ ವಿಭಾಗದಲ್ಲಿ ಚಾಂಪಿಯನ್ ಆದರು. ಕ್ರೀಡಾಕೂಟದಲ್ಲಿ ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆ ಒಳಗೊಂಡ 89 ರೋಟರಿ ಕ್ಲಬ್‌ಗಳ ಸದಸ್ಯರು ಹಾಗೂ ಅವರ ಕುಟುಂಬಸ್ಥರು ಸೇರಿದಂತೆ 500೦ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!