Mysore
26
haze

Social Media

ಗುರುವಾರ, 01 ಜನವರಿ 2026
Light
Dark

ವಿದ್ಯಾರ್ಥಿವೇತನ ರದ್ದು ಖಂಡಿಸಿ ಬಿವಿಎಫ್ ಪ್ರತಿಭಟನೆ

ಚಾಮರಾಜನಗರ: ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿವೇತನ ರದ್ದುಪಡಿಸಿರುವ ಆದೇಶ ಹಿಂಪಡಯಬೇಕು ಹಾಗೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನದ ಮುಂಭಾಗದಿAದ ಮೆರವಣಿಗೆ ಹೊರಟ ಫೋರ್ಸ್ನ ಮುಖಂಡರು, ವಿದ್ಯಾರ್ಥಿಗಳು ಭುವನೇಶ್ವರಿ ವೃತ್ತಕ್ಕೆ ತೆರಳಿ ಮಾನವ ಸರಪಳಿ ರಚಿಸಿ ಕೆಲಕಾಲ ರಸ್ತೆ ಸಂಚಾರ ತಡೆ ನಡೆಸಿದರು. ನಂತರ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.

ಬಿವಿಎಫ್ ಜಿಲ್ಲಾಧ್ಯಕ್ಷ ಚಂದ್ರಕಾAತ್ ಮಾತನಾಡಿ, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರ ಇಲಾಖೆಯಿಂದ ಹೊರಡಿಸಿರುವ ಸುತ್ತೋಲೆ ಅನುಸಾರ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಕೇವಲ ೯ ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ನೀಡಬೇಕು ಎಂದಿದೆ ಎಂದು ತಿಳಿಸಿದರು.

೧ ರಿಂದ ೮ನೇ ತರಗತಿ ವಿದ್ಯಾರ್ಥಿಗಳು ಆರ್‌ಟಿಇ ಕಾಯ್ದೆಯಡಿ ಉಚಿತ ಶಿಕ್ಷಣ ಪಡೆಯುತ್ತಿರುವುದರಿಂದ ಅವರಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡುವಂತಿಲ್ಲ ಎನ್ನುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ೬ ರಿಂದ ೧೪ನೇ ವಯಸ್ಸಿನ ಮಕ್ಕಳಿಗೆ ಉಚಿತ, ಕಡ್ಡಾಯ ಶಿಕ್ಷಣ ಕೊಡಬೇಕೆನ್ನುವ ಪರಿಚ್ಚೇದ ೨೧-ಎ ಮತ್ತು ಪ್ರಭುತ್ವ ನಿರ್ದೇಶನ ತತ್ವ ಪರಿಚ್ಚೇದ ೪೫ನೇ ಉಲ್ಲಂಘನೆಯಾಗುತ್ತದೆ ಎಂದು ದೂರಿದರು.

ವಕೀಲ ಮಹೇಂದ್ರ ಮಾತನಾಡಿ, ಈ ಆದೇಶ ವಿರುದ್ದ  ಎಸ್‌ಸಿ, ಎಸ್‌ಟಿ ಶಾಸಕರು ಚಕಾರವೆತ್ತಿಲ್ಲ. ವಿದ್ಯಾರ್ಥಿಗಳ ಪರಿಶ್ರಮ, ಮತದಿಂದ ಗೆದ್ದ ಶಾಸಕರಾದ ಎನ್.ಮಹೇಶ್ ಅವರು ಕೂಡ ಈ ವಿಚಾರದಲ್ಲಿ ಮೌನವಾಗಿರುವುದು ಸರಿಯಲ್ಲ. ಮಕ್ಕಳಿಗೆ ಸಮವಸ್ತç, ಶೂ. ಕೊಟ್ಟಿಲ್ಲ. ಎಸ್‌ಸಿ,ಎಸ್‌ಟಿ ಶಾಸಕರು ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ  ಎಂದು ಆರೋಪಿಸಿದರು. ನಂತರ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಜಿಲ್ಲಾ ಸಂಯೋಜಕ ರವಿಮೌರ್ಯ, ತಾಲೂಕು ಅಧ್ಯಕ್ಷ ಮನೋಜ್, ತಾಲೂಕು ಸಂಯೋಜಕ ಮಹೇಶ್, ಆಶ್ರೀತ್, ಮನೋಜ್, ರಾಮಸಮುದ್ರ ಬಾಬು, ಮಹೇಶ್, ರಾಜೇಂದ್ರ, ವಿದ್ಯಾರ್ಥಿಗಳಾದ ಮಹದೇವಸ್ವಾಮಿ, ಮಂಜು, ಮೋಹನ್, ಜ್ಯೋತಿ, ಚಂದ್ರಕಲಾ, ಉಷಾ, ಐಶ್ವರ್ಯ ಇತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!