Mysore
26
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಮೂಡಾ ಸದಸ್ಯರಾಗಿ ಎಂಎಲ್‌ಸಿ ಎಚ್‌.ವಿಶ್ವನಾಥ್‌ ನಾಮ ನಿರ್ದೇಶನ

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯ ಎ.ಎಚ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ(ನಗರಾಭಿವೃದ್ದಿ ಇಲಾಖೆ) ಸತೀಶ್ ಕಬಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ಕಾಯ್ದೆ ೧೯೮೭ರ ಕಲಂ ೩(೩)(ಡಿ) ಅನ್ವಯ ಕಲಂ ೩(೪)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ರವರನ್ನು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಒಂದು ವರ್ಷಗಳ ಹಿಂದೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಅವರನ್ನು ನೇಮಿಸಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತಾದರೂ ಕೊನೆ ಕ್ಷಣದಲ್ಲಿ ತಪ್ಪಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!