ಮೈಸೂರು: ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಈಡೇರಿಕೆಗೆ ಒತ್ತಾಯಿಸಿ ಡಿ.17ರಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದವತಿಯಿಂದ ರಾಜ್ಯಾಧ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಆರ್.ಬಾಲರಾಜ್ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ಉಚಿತ ಬಸ ಪಾಸ್ ಸೌಕರ್ಯ, ವಿದ್ಯಾರ್ಥಿ ವೇತನ, ವಿಶ್ವವಿದ್ಯಾನಿಲಯಗಳಲ್ಲಿ ಉಪನ್ಯಾಸಕರ ಕೊರತೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶಗಳನ್ನು ಸಹ ಸರಿಯಾದ ಸಮಯಕ್ಕೆ ನೀಡದೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಸರ್ಕಾರ ವಿದ್ಯಾರ್ಥಿಗಳ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಆದ್ದರಿಂದ ಅಂದು ರಾಜ್ಯಾದ್ಯಂತ ಕಾಲೇಜುಗಳ ಬಂದ್ ಮತ್ತು ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಹೇಳಿದರು.
ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿಗಳಾದ ಮಜಿದ್ ಹಿದಾಯತ್, ಮಹದೇವಸ್ವಾಮಿ, ಜಿಲ್ಲಾ ಉಪಾಧ್ಯಕ್ಷರುಗಳಾದ ಗೌತಮ್, ಪೂಜಾಶ್ರೀ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.