ಬೆಂಗಳೂರು: ಮಹಾನಗರದಲ್ಲಿ ಮುಂದುವರಿದ ತುಂತುರು ಮಳೆ, ಕಳೆದ 2 ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ತುಂತುರು ಮಳೆಗೆ ಬೆಂಗಳೂರು ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ನಗರದ ರಸ್ತೆಗಳು ಜಲಾವೃತಗೊಂಡಿವೆ. ರಾಜ್ಯಾದ್ಯಂತ ಇನ್ನು 2 ದಿನಗಳ ಕಾಲ ಮಳೆಯಾಗಲಿದೆ. ಹೀಗಾಗಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.





