Mysore
25
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಕಾದಾಟದಲ್ಲಿ ಗಂಭೀರ ಗಾಯಗೊಂಡಿದ್ದ ಕಾಡಾನೆ ಸಾವು

ಅಂತರಸಂತೆ: ಗಂಡಾನೆಯೊಂದು ಮತ್ತೊಂದು ಕಾಡಾನೆಯೊಂದಿಗೆ ಕಾದಾಟ ನಡೆಸಿ ಗಂಭೀರವಾಗಿ ಗಾಯಗೊಂಡು ಬಳಿಕ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿಗಳು ಗಸ್ತು ತಿರುಗುವ ವೇಳೆ ಕಾಡಾನೆಯೊಂದು ಸಾವನ್ನಪ್ಪಿರುವುದು ತಿಳಿದುಬಂದಿದೆ. ಕೂಡಲೇ ಸಿಬ್ಬಂದಿಗಳು ಮೇಲಾಧಿಕಾರಿಗಳಿಗೆ ಈ ವಿಷಯವನ್ನು ತಿಳಿಸಿದ ಬಳಿಕ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಆನೆದ ದೇಹದ ಮೇಲೆ ಗಾಯದ ಗುರುತುಗಳು ಪತ್ತೇಯಾಗಿದ್ದು, ಆನೆಯು ಮತ್ತೊಂದು ಆನೆಯೊಂದಿಗೆ ಕಾದಾಡಿ ಸಾವನ್ನಪ್ಪಿರುವುದು ತಿಳಿದುಬಂದಿದೆ. ಬಳಿಕ ನಾಗರಹೊಳೆ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದರವರ ಮಾರ್ಗದರ್ಶನ ಮೇರೆಗೆ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಬಳಿಕ ಆನೆ ಸಾವನ್ನಪ್ಪಿದ ಹುಲಿ ಸಂರಕ್ಷಿತ ಪ್ರದೇಶವಾದ್ದರಿಂದ ಆನೆಯ ಕಳೇಬರವನ್ನು ಬೇರೆ ಪ್ರಾಣಿಗಳಿಗೆ ಆಹಾರವಾಗಲೆಂದು ಹಾಗೇಯೆ ಬಿಡಲಾಯಿತು.
ಸ್ಥಳದಲ್ಲಿ ಎಸಿಎಫ್ ರಂಗಸ್ವಾಮಿ, ಪಶುವೈದ್ಯ ಡಾ.ಬಿ.ಬಿ.ಪ್ರಸನ್ನ, ವಲಯ ಅರಣ್ಯಾಧಿಕಾರಿ ಕೆ.ಎಲ್.ಮಧು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!