Mysore
21
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ತಿ.ನರಸೀಪುರ: ಮೇಯಿಸುತ್ತಿದ್ದ ಮೇಕೆಯನ್ನೇ ಹೊತ್ತೊಯ್ದ ಚಿರತೆ

ತಿ.ನರಸೀಪುರ: ಮಹಿಳೆಯೊಬ್ಬರು ಜಮೀನಿನಲ್ಲಿ ಮೇಯಿಸುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ನಡೆದಿದೆ.
ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ಶಿವಮಲ್ಲೇಗೌಡರ ಪತ್ನಿ ಸೌಭಾಗ್ಯ ಎಂಬವರು ಬುಧವಾರ ಮಧ್ಯಾಹ್ನ ಜಮೀನಿನ ಬಳಿ ಆಡುಗಳನ್ನು ಮೇಯಿಸುತ್ತಿದ್ದಾಗ ಚಿರತೆ ದಾಳಿ ಮಾಡಿದೆ. ಒಂದು ಆಡುಮರಿಯನ್ನು ಕಬ್ಬಿನ ಗದ್ದೆ ಒಳಗೆ ಎಳೆದುಕೊಂಡು ಹೋಗಿದೆ.
ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಚಿರತೆ ಎಲ್ಲೂ ಕಂಡುಬಾರದ ಹಿನ್ನೆಲೆಯಲ್ಲಿ ಬೋನನ್ನು ಇಟ್ಟಿದ್ದಾರೆ.ಚಿರತೆ ಸೆರೆ ಹಿಡಿಯಲು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅರಣ್ಯ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!