Mysore
21
overcast clouds

Social Media

ಮಂಗಳವಾರ, 06 ಜನವರಿ 2026
Light
Dark

ಡಿ.20 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಹವಾಮಾನ ವಿಜ್ಞಾನಿ ಪ್ರಸಾದ್ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಒಣ ಹವೆ ಮುಂದುವರಿಯಲಿದ್ದು, 5 ನೇ ದಿನ ಅಂದರೆ ಡಿಸೆಂಬರ್ 21 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಹಗುರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 20 ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಹವಾಮಾನ ವಿಜ್ಞಾನಿ ಪ್ರಸಾದ್, ಉತ್ತರ ಒಳನಾಡಿನ ಐದು ದಿನವೂ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಒಣಹವೆ ಇರಲಿದ್ದು, ನಾಲ್ಕನೇ ದಿನದಿಂದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ಕೊಡಗಿನಲ್ಲಿ ಒಂದೆರಡು ದಿನ ಹಗುರ ಮಳೆಯಾಗಲಿದೆ. ಐದನೇ ದಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಹೊರತು ಪಡಿಸಿ ಉಳಿದೆಡೆ ಒಂದೆರಡು ಕಡೆ ಹಗುರ ಮಳೆಯಾಗಲಿದೆ ಎಂದರು‌.ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 15.6 ಡಿಗ್ರಿ ಸೆಲ್ಸಿಯಸ್ ಇದ್ದು, ಇಂದು ಮತ್ತು ನಾಳೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾಗಶಃ ಮೋಡ ಇರಲಿದೆ. ಬೆಳಿಗ್ಗೆ ಮಂಜು ಇರಲಿದೆ. ನಾಳೆ ಗರಿಷ್ಠ 28, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಅತೀ ಕಡಿಮೆ ಕನಿಷ್ಠ ಉಷ್ಣಾಂಶ ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಈಶಾನ್ಯ ಬಂಗಾಳಕೊಲ್ಲಿ ಮತ್ತು ಪೂರ್ವ ಭೂಮಧ್ಯ ಹಿಂದೂ ಮಹಾಸಾಗರದಲ್ಲಿ ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಆಗಿದೆ. ಈ ತೀವ್ರತೆ ಮುಂದುವರಿದ್ರೆ ಮುಂದಿನ ಎರಡು ದಿನಗಳಲ್ಲಿ ಪಶ್ಚಿಮಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!