Mysore
17
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ

ಹನೂರು : ತಾಲೂಕಿನ ಕೂಡ್ಲೂರು ಸಮೀಪದ ಸೇತುವೆ ನಿರ್ಮಾಣ ಕಾಮಗಾರಿಗೆ ಒಂದು ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು.

ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಬೆಳಗಾವಿ ಅಧಿವೇಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ ಈಗಾಗಲೇ ಒಂದು ಕೋಟಿ ಮಂಜೂರಾಗಿದ್ದು, ಇನ್ನು ನಾಲ್ಕು ಕೋಟಿ ಅನುದಾನ ಬೇಕೆಂದು ಅಧಿಕಾರಿಗಳು ವರದಿ ನೀಡಿದ್ದಾರೆ ಈ ಸಂಬಂಧ ಅನುಮೋದನೆಗಾಗಿ ಹಣಕಾಸು ಇಲಾಖೆಗೆ ವರದಿ ಸಲ್ಲಿಸಲಾಗಿದೆ.ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾದ ನಂತರ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮರು ಪ್ರಶ್ನೆ ಸಲ್ಲಿಸಿದ ಶಾಸಕ ಆರ್ ನರೇಂದ್ರ ವಡಕೆ ಹಳ್ಳ ಗ್ರಾಮದಿಂದ ರಾಮಾಪುರದವರಿಗೆ 72 ಕಿ.ಮೀ ರಸ್ತೆ ಈ ಹಿಂದೆ ಎಂಡಿಆರ್ ರಸ್ತೆಯಾಗಿದ್ದು ಇದೀಗ ಮೇಲ್ದರ್ಜೆಗೇರಿದೆ. ಈ ವ್ಯಾಪ್ತಿಯಲ್ಲಿ ನಾಲ್ಕು ಗ್ರಾಮ ಪಂಚಾಯಿತಿ ಜನರು ಓಡಾಡುತ್ತಿದ್ದಾರೆ. ಪ್ರತಿದಿನ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಪಾದಾಚಾರಿಗಳು ಬಿದ್ದು ಗಾಯಗೊಂಡಿದ್ದಾರೆ.

ಈ ಹಿನ್ನೆಲೆ ಸೇತುವೆಯನ್ನು ಆದಷ್ಟು ಬೇಗ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಈಗ ನೀವು ಬಿಡುಗಡೆ ಮಾಡಿರುವ ಒಂದು ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಬಹುದೇ ಎಂದು ಪ್ರಶ್ನಿಸಿದರು.

ಪ್ರತಿಕ್ರಿಯಿಸಿದ ಸಚಿವ ಒಂದು ಕೋಟಿ ಹಣದಲ್ಲಿ ಕಾಮಗಾರಿ ನಡೆಸಬಹುದೆಂದು ತಿಳಿಸಿದರು. ಶಾಸಕ ನರೇಂದ್ರ ಎರಡುವರೆ ಕೋಟಿ ಅನುದಾನ ಸಾಕಾಗುತ್ತದೆ ಆದ್ದರಿಂದ ಇನ್ನೂ ಎರಡು ಕೋಟಿ ಅನುದಾನ ನೀಡಿ ಕಾಮಗಾರಿಯನ್ನು ಪ್ರಾರಂಭಿಸುವುದರ ಮೂಲಕ ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!