Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ಗುಂಡ್ಲುಪೇಟೆಯಲ್ಲಿ ದರ್ಶನ್ ಅಭಿಮಾನಿಗಳಿಂದ ಪ್ರತಿಭಟನೆ

ಗುಂಡ್ಲುಪೇಟೆ: ಹೊಸಪೇಟೆಯಲ್ಲಿ ಖ್ಯಾತ ನಟ ದರ್ಶನ್‌ರವರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಉನ್ನು ಬಂಧಿಸಿ, ದರ್ಶನ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ದರ್ಶನ್ ಅಭಿಮಾನಿ ಬಳಗದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಹಳೆಯ ಪ್ರವಾಸಿ ಮಂದಿರದಿಂದ ಎಂಡಿಸಿಸಿ ಸರ್ಕಲ್‌ವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿ ಮಾನವ ಸರಪಳಿ ರಚಿಸಿ ದರ್ಶನ್ ಪರ ಘೋಷಣೆ ಕೂಗಲಾಯಿತು.
ಕೂಡಲೇ ಆರೋಪಿಯನ್ನು ಬಂಧಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಕನ್ನಡ ಚಿತ್ರರಂಗದ ಕಲಾವಿದರ ಮೇಲೆ ಇಂತಹ ಕೃತ್ಯ ನಡೆಯದಂತೆ ಕ್ರಮವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಸಿಲ್ದಾರ್ ರವಿಶಂಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ದರ್ಶನ್ ಅಭಿಮಾನಿಗಳು ಭಾಗಿಯಾಗಿದ್ದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!