Mysore
23
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು : ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳ ಇಂದು ಬೆಳ್ಳಂ ಬೆಳ್ಳಗೆ ದೀಡಿರ್ ಪ್ರತಿಭಟನೆ ನಡೆಸಿದರು.

ಶುಕ್ರವಾರ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ನೂರಾರು ಹೆಚ್ಚುವರಿ ಬಸ್ ಗಳನ್ನು ಬಿಡಲಾಗಿತ್ತು. ಆದರೆ ಈ ವಿಶೇಷ ಬಸ್ ಗಳಲ್ಲಿ, ಪಾಸ್ ಇರುವ ಮಕ್ಕಳನ್ನು ಕರೆದುಕೊಂಡು ಹೋಗದ ಹಿನ್ನೆಲೆ ಸಾವಿರಾರು ವಿದ್ಯಾರ್ಥಿಗಳು ಹನೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಎಲ್ಲಾ ಕೆಎಸ್ಆರ್ಟಿಸಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಆಕ್ರೋಶ : ವಿಶೇಷ ಜಾತ್ರ ಹಬ್ಬ ಹರಿದಿನ ಸಂದರ್ಭದಲ್ಲಿ ನಮಗೆ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ ಈ ಬಗ್ಗೆ ಹಲವಾರು ಬಾರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಾಲೇಜಿನಲ್ಲಿ 10 ನಿಮಿಷ ತಡವಾಗಿ ಹೋದರು ಸಹ ನಮ್ಮನ್ನು ಕಾಲೇಜಿಗೆ ಸೇರಿಸಿಕೊಳ್ಳುವುದಿಲ್ಲ, ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕುರಟ್ಟಿ ಹೊಸೂರು ಗ್ರಾಮದ ನವ್ಯಶ್ರೀ ಮಾತನಾಡಿ ಕೆಎಸ್ಆರ್ಟಿಸಿ ಬಸ್ ನ ನಿರ್ವಾಹಕರು ಹಾಗೂ ಚಾಲಕರು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ನಾವು ಮೊದಲೇ ಹಣ ಪಾವತಿ ಮಾಡಿ ಬಸ್ ಪಾಸ್ ಪಡೆದಿದ್ದರು ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ ಸಾರಿಗೆ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೆ ಇರುವುದರಿಂದ ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!