Mysore
22
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಒಂದೇ ವೇದಿಕೆಯಲ್ಲಿ ಮೂರೂ ರಾಜಕೀಯ ಪಕ್ಷಗಳ ನಾಯಕರು

ಮೈಸೂರು: ಮೂರು ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ‘ಆಂದೋಲನ ೫೦ಸಾರ್ಥಕ ಪಯಣ’ ಕಾರ್ಯಕ್ರಮದ ವೇದಿಕೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.
ಬಿಜೆಪಿಯ ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್, ಕಾಂಗ್ರೆಸ್‌ನ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ತಾಪಂ ಮಾಜಿ ಅಧ್ಯಕ್ಷ ಆರ್.ಚೆಲುವರಾಜು, ಜಾತ್ಯತೀತ ಜನತಾದಳದ ಶಾಸಕ ಎಂ.ಅಶ್ವಿನ್‌ಕುಮಾರ್ ಅವರು ಒಟ್ಟಿಗೆ ಬೆರೆತು ಉಭಯ ಕುಶಲೋಪರಿ ವಿಚಾರಿಸಿಕೊಂಡರು. ಸಜ್ಜನ, ಸರಳತೆಯ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ತಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣೆಗೆ ಸಜ್ಜಾಗುತ್ತಿರುವ ಹಾಲಿ-ಮಾಜಿ ಶಾಸಕರಿಬ್ಬರೂ ಜತೆಯಲ್ಲಿ ವೇದಿಕೆ ಹಂಚಿಕೊಂಡಿದ್ದು ಸಭಿಕರಲ್ಲಿ ಕುತೂಹಲ ಮೂಡಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!