Mysore
34
scattered clouds

Social Media

ಮಂಗಳವಾರ, 12 ಮೇ 2026
Light
Dark

ಮೈಸೂರು, ಮಂಡ್ಯ, ಚಾ. ನಗರದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ

ಬೆಂಗಳೂರು : ಮೈಸೂರು ಮಂಡ್ಯ ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 29 ರ ವರೆಗೆ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ  ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಚಾಮರಾಜನಗರ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಡಿ. 30ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಇನ್ನೂ 3 ದಿನ ತುಂತುರು ಮಳೆಯಾಗಲಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!