Mysore
25
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಗುಂಡೇಟಿನಿಂದ ಕಾಡುಕೋಣ ಸಾವು

ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಅನೇಕೂರು ವನ್ಯಜೀವಿ ವಲಯದಲ್ಲಿ ಗುಂಡೇಟಿನಿಂದ ಕಾಡುಕೋಣ ಸಾವಿಗೀಡಾಗಿರುವ ಘಟನೆ ನಡೆದಿದೆ.

ದೇವಮಟ್ಟ ಶಾಖೆಯ ಸಿಂಗನೂರು ಗಸ್ತಿನ ಮೈಸೂರು- ಗೋಣಿಕೊಪ್ಪ ಹೆದ್ದಾರಿಯ ರಸ್ತೆ ಬದಿಯಲ್ಲಿ ಮಂಗಳವಾರ ಬೆಳಿಗ್ಗೆ ಅಂದಾಜು 8 ವರ್ಷದ ಕಾಡುಕೋಣ ಅನುಮಾನಾಸ್ಪದವಾಗಿ ಮೃತಪಟ್ಟಿದೆ.

ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಅರಣ್ಯಾಧಿಕಾರಿಗಳು, ಪಶುವೈದ್ಯಾಧಿಕಾರಿಗಳು, ವಲಯ ಅರಣ್ಯಾಧಿಕಾರಿ, ದೇವಮಚ್ಚಿ, ಶಾಖೆ, ಎಸ್.ಟಿ.ಪಿ.ಎಫ್. ಸಿಬ್ಬಂದಿ ಹಾಗೂ ಅರಣ್ಯ ರಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಗುಂಡೇಟಿನಿಂದ ಕಾಡುಕೋಣ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಕಾಡುಕೋಣದ ಮರಣೋತ್ತರ ಪರೀಕ್ಷೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಇಲಾಖೆಯವರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!