Mysore
15
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರದಿಂದ ಮತ್ತೆ ಬಂಪರ್ ಕೊಡುಗೆ

ಬೆಂಗಳೂರು: ಮೊಲ್ಯಾಸಿಸ್ ಮಾರಾಟದಿಂದ ಕಾರ್ಖಾನೆಗಳಿಗೆ ಬರುವ ಲಾಭಾಂಶವನ್ನು ರೈತರಿಗೆ ವರ್ಗಾಯಿಸಲು ಸಕ್ಕರೆ ಕಾರ್ಖಾನೆಗಳಿಗೆ ಆದೇಶವನ್ನು ಹೊರಡಿಸಲಾಗಿದೆ.

ಎಫ್ಆರ್‌ಪಿ ದರ ಹೊರತುಪಡಿಸಿ, ಪ್ರತೀ ಮೆಟ್ರಿಕ್ ಟನ್‌ಗೆ 100 ರೂಪಾಯಿ ಹೆಚ್ಚು ಪಾವತಿಸಲು ಆದೇಶಿಸಲಾಗಿದೆ.

ಈ ಮೂಲಕ ರಾಜ್ಯದ ಕಬ್ಬು ಬೆಳೆಗಾರರಿಗೆ 622 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಸಂದಾಯವಾಗಲಿದೆ.

ಈ ಮುನ್ನ ರಾಜ್ಯ ಸರ್ಕಾರ ಎಥೆನಾಲ್‌ನಿಂದ ಬರುವ ಲಾಭಾಂಶದಲ್ಲಿ 50 ರೂಗಳಂತೆ ಒಟ್ಟು ಎಥೆನಾಲ್‌ನಿಂದ 204 ಕೋಟಿ ರೂಪಾಯಿ ಪಾವತಿಸಲು ಆದೇಶಿಸಿತ್ತು. ಕಬ್ಬಿನ ಉಪ ಉತ್ಪನ್ನಗಳಾದ ಎಥೆನಾಲ್ ಮತ್ತು ಮೊಲ್ಯಾಸಿಸ್ ಮೂಲಕ ಒಟ್ಟಾರೆ ಈ ಸಾಲಿನಲ್ಲಿ ಎಫ್ಆರ್‌ಪಿ ದರ ಹೊರತುಪಡಿಸಿ, ಕಬ್ಬು ಬೆಳೆಗಾರರಿಗೆ ಒಟ್ಟು 804 ಕೋಟಿ ರೂಗಳನ್ನು ಹೆಚ್ಚುವರಿಯಾಗಿ ಪಾವತಿಸಲು ಈವರೆಗೆ ಆದೇಶಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!