Mysore
21
overcast clouds

Social Media

ಭಾನುವಾರ, 14 ಜೂನ್ 2026
Light
Dark

ಸುತ್ತೂರು ಜಾತ್ರೆಗೆ ವಿಶೇಷ ಬಸ್‌ ವ್ಯವಸ್ಥೆ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಪ್ರಯುಕ್ತ ಸುತ್ತೂರು ಕ್ಷೇತ್ರಕ್ಕೆ ಅಧಿಕ ಸಂಖ್ಯೆಯಲ್ಲಿ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ತಿ.ನರಸೀಪುರ, ಕೊಳ್ಳೇಗಾಲ, ಹುಣಸೂರು, ಕೆ.ಆರ್.ನಗರ, ಎಚ್.ಡಿ.ಕೋಟೆ, ಗುಂಡ್ಲುಪೇಟೆ, ಚಾಮರಾಜನಗರ, ಪಾಂಡವಪುರ ಕಡೆಯಿಂದ ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತದೆ. ಇದಲ್ಲದೆ ಮೈಸೂರು ನಗರದ ಬನ್ನಿಮಂಟಪ, ಕುವೆಂಪುನಗರ, ಸಾತಗಳ್ಳಿ, ವಿಜಯನಗರ ಘಟಕದಿಂದ ಜಾತ್ರಾ ವಿಶೇಷ ಬಸ್‌ಗಳು ಸಂಚರಿಸಲಿವೆ. ಪ್ರತಿನಿತ್ಯವೂ ಬೆಳಿಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾದದ ವ್ಯವಸ್ಥೆ ಇರುತ್ತದೆ. ದೂರದಿಂದ ಬರುವವರಿಗೆ ತಾತ್ಕಾಲಿಕ ಕುಟೀರಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!