ಮೈಸೂರು: ಪೌರಕಾರ್ಮಿಕರ ಹುದ್ದೆಗಳ ವಿಶೇಷ ನೇಮಕಾತಿಗೆ ಸಂಬಂಧಿಸಿದಂತೆ ಮೈಸೂರು ಮಹಾನಗರಪಾಲಿಕೆ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಆಹ್ವಾನಿಸಿದೆ.
ಪೌರಕಾರ್ಮಿಕರ ಹುದ್ದೆಗಳ ಪೈಕಿ ನೇರ ನೇಮಕಾತಿಯಡಿ ಖಾಲಿ ಇರುವ ೨೦೫ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡಲು ಮೈಸೂರು ಮಹಾ ನಗರಪಾಲಿಕೆಯಲ್ಲಿ ಹಾಲಿ ನೇರ ಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ ಅಥವಾ ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಪೌರಕಾರ್ಮಿಕರು, ಲೋಡರ್ ಅಥವಾ ಕ್ಲೀನರ್ ಹುದ್ದೆಗಳಲ್ಲಿ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರುಗಳಿಂದ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೈಸೂರು ನಗರಪಾಲಿಕೆ ಕೇಂದ್ರ ಕಚೇರಿಯಲ್ಲಿ ಅರ್ಜಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಫೆ.೨೦ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮಹಾನಗರಪಾಲಿಕೆ ಕೇಂದ್ರ ಕಚೇರಿಯಿಂದ ಮಾಹಿತಿ ಪಡೆಯಬಹುದು ಅಥವಾ ಪಾಲಿಕೆ ವೆಬ್ಸೈಟ್ http://www.mysurucity.mrc.gov.in/ ಭೇಟಿ ನೀಡಬಹುದಾಗಿದೆ.
ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ




