Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಮರಳಿ ಬಿಜೆಪಿ ತೆಕ್ಕೆಗೆ ಎಲ್. ಸುರೇಶ್

ಗುಂಡ್ಲುಪೇಟೆ: ತಾಲ್ಲೂಕಿನ ಕುರುಬ ಜನಾಂಗದ ಮುಖಂಡ ಎಲ್.ಸುರೇಶ್ ಕಾಂಗ್ರೆಸ್ ತೊರೆದು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶಾಸಕ ನಿರಂಜನ್ ಕುಮಾರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿಯೇ ಇದ್ದ ಎಲ್.ಸುರೇಶ್ ಬಿಜೆಪಿ ಮಂಡಲಾಧ್ಯಕ್ಷರಾಗಿದ್ದರು. ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈಗ ಮತ್ತೆ ಮರಳಿ ಬಿಜೆಪಿ ತೆಕ್ಕೆಗೆ ಬಂದಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ಹಿರೀಕಾಟಿ ಸೋಮಶೇಖರ್, ಮಂಡಲಾಧ್ಯಕ್ಷ ಜಗದೀಶ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್, ಮಲ್ಲಿಕಾರ್ಜುನಪ್ಪ ಮತ್ತಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!