Mysore
26
light rain

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಮಲೆಮಹದೇಶ್ವರ ಬೆಟ್ಟ ಹತ್ತುತ್ತಿದ್ದ ಬಸ್‌ ಪಲ್ಟಿ : 15ಕ್ಕೂ ಹೆಚ್ಚು ಜನರಿಗೆ ಗಾಯ

ಹನೂರು :ತಮಿಳುನಾಡಿನಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರ ಖಾಸಗಿ ಬಸ್ ಅಪಘಾತ ಗೊಂಡು ಸುಮಾರ 15 ಕ್ಕೂ ಜನರು ಗಾಯಗೊಂಡಿದ್ದಾರೆ.

ಗುಜರಾತ್ ರಾಜ್ಯದಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದ ಗುಜರಾತ್ ಪ್ರವಾಸಿಗರು ತಮಿಳುನಾಡು ರಾಜ್ಯದ ಪ್ರವಾಸ ಮುಗಿಸಿ ಮಲೆ ಮಾದೇಶ್ವರ ಬೆಟ್ಟಕ್ಕೆ ಬುದುವಾರ ಬೆಳಗ್ಗೆ ಆಗಮಿಸುತ್ತಿದ್ದ ವೇಳೆ ಪಾಲರ್ ಸಮೀಪದ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂಬದಿಯಿಂದ ಗುಂಡಿಗೆ ಬಿದ್ದು ಜಖಂ ಗೊಂಡಿದೆ.

ತಕ್ಷಣ ಮಲೆ ಮಾದೇಶ್ವರ ಬೆಟ್ಟ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮಲೆ ಮಾದೇಶ್ವರ ಬೆಟ್ಟ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಗಾಯಗೊಂಡಿದ್ದ 15 ಜನರನ್ನು 108 ಅಂಬುಲೆನ್ಸ್ ಮೂಲಕ ಮಲೆ ಮಾದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ. ಬಸ್ ನಲ್ಲಿ 60ಕ್ಕೂ ಹೆಚ್ಚು ಜನರು ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಉಳಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!