Mysore
14
overcast clouds

Social Media

ಸೋಮವಾರ, 15 ಡಿಸೆಂಬರ್ 2025
Light
Dark

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಸಿಂಹಪ್ರಿಯಾ’ ಜೋಡಿ

ಸಾಂಸ್ಕೃತಿಕ ನಗರದಲ್ಲಿ ಜರುಗಿದ ಮದುವೆಗೆ ಸಿನಿತಾರೆಯರು ಮತ್ತು ರಾಜಕೀಯ ಗಣ್ಯರು ಸಾಕ್ಷಿ

ಮೈಸೂರು: ಚಂದನವನದ ಖ್ಯಾತ ನಟ ವಸಿಷ್ಠ ಸಿಂಹ ಮತ್ತು ನಟಿ ಹರಿಪ್ರಿಯಾ ಅವರು ನಗರದಲ್ಲಿ ಗುರುವಾರ(ಜ.೨೬) ನೆರವೇರಿತು. ಮದುವೆಗೆ ಎರಡೂ ಕುಟುಂಬದ ಸದಸ್ಯರು, ಸ್ನೇಹಿತರು, ಸಾಕಷ್ಟು ಸಿನಿತಾರೆಯರು ಮತ್ತು ರಾಜಕೀಯ ಗಣ್ಯರು ಸಾಕ್ಷಿಯಾಗುವ ಮೂಲಕ ನವಜೋಡಿಗೆ ಹಾರೈಸಿದರು.

ನಗರದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ‘ಸಿಂಹಪ್ರಿಯಾ’ ಜೋಡಿಯ ವಿವಾಹ ಶಾಸ್ತ್ರೋಪ್ತವಾಗಿ ನೆರವೇರಿದ್ದು, ಈ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಟರಾದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ, ನಟಿ ಅಮೃತ ಅಯ್ಯಂಗಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೂಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಕಾಂಗ್ರೆಸ್ ಮುಖಂಡ ನವೀನ್ ಕುಮಾರ್, ಬಿಜೆಪಿ ಮುಖಂಡರಾದ ರಾಜೇಂದ್ರ, ಶ್ರೀವತ್ಸ, ಜೋಗಿ ಮಂಜು ಇತರರು ಭಾಗಿಯಾದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!