ಚಾಮರಾಜನಗರ: ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ.
ಇಷ್ಟು ಭಾರದ ದುರ್ವಾಸನೆಯನ್ನು ರೋಗಿಯ ದೇಹದಿಂದ ತೆಗೆದಿರುವುದು ಸಿಮ್ಸ್ ಆಸ್ಪತ್ರೆಯಲ್ಲಿ ಇದೇ ಮೊದಲು. ಆಸ್ಪತ್ರೆಯ ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಕಿರಣ್ ನೇತೃತ್ವದ ತಂಡ 3 ಗಂಟೆಗಳ ಕಾಲ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ತೆಗೆದಿದ್ದಾರೆ.
50 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿದ್ದ ಈ ಗಡ್ಡೆ ಕ್ಯಾನ್ಸರ್ ಗಡ್ಡೆಯಾ ಅಥವಾ ಸಾಮಾನ್ಯ ಗಡ್ಡೆಯಾ ಎಂಬುದು ಸ್ಪಷ್ಟವಾಗಿಲ್ಲ. ಗಡ್ಡೆಯನ್ನು ಸಿಮ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಇದರ ವರದಿ ಬಂದ ಮೇಲೆ ತಿಳಿಯಲಿದೆ ಎಂದು ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ತಿಳಿಸಿದರು.
ಡಾ.ಕಿರಣ್, ಡಾ.ಚಂದ್ರಶೇಖರಯ್ಯ, ಡಾ.ಶಶಿಧರ್ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿ ಶಸ್ತ್ರಚಿಕಿತತ್ಸೆಯಲ್ಲಿ ಭಾಗವಹಿಸಿದ್ದರು.
ಹೊಟ್ಟೆಯಲ್ಲಿದ್ದ 5.5 ಕೆಜಿ ಗಡ್ಡೆ ತೆಗೆದ ಸಿಮ್ಸ್ ವೈದ್ಯರ ತಂಡ





