Mysore
28
broken clouds

Social Media

ಬುಧವಾರ, 29 ಏಪ್ರಿಲ 2026
Light
Dark

ಕಾಂಗ್ರೆಸ್‌ ಕಚೇರಿ ಎದುರು ರಾಷ್ಟ್ರಧ್ವಜಾರೋಹಣ

ಮೈಸೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಐತಿಹಾಸಿಕ ಭಾರತ್ ಜೋಡೋ ಯಾತ್ರೆಯ ಸಮಾರೋಪವು ಜಮ್ಮು ಮತ್ತು ಕಾಶ್ಮೀರದಲ್ಲಿ ಮುಕ್ತಾಯವಾಗಿದ್ದರಿಂದ ಮೈಸೂರು ನಗರ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕಚೇರಿ ಎದುರು ರಾಷ್ಟ್ರಧ್ವಜಾರೋಹಣ ಮಾಡಲಾಯಿತು.
ದೇಶದ ಎಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಧ್ವಜಾರೋಹಣ ಮಾಡಿ ಗೌರವ ಸಲ್ಲಿಸುವಂತೆ ಹೈಕಮಾಂಡ್ ಆದೇಶ ನೀಡಿದ ಹಿನ್ನಲೆಯಲ್ಲಿ ಸಮಯ 10ಕ್ಕೆ ಧ್ವಜಾರೋಹಣ ನೆರವೇರಿಸಿ ಭಾರತ್ ಜೋಡೋ ಯಾತ್ರೆಗೆ ತೆರೆ ಎಳೆಯಲಾಯಿತು. ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ, ಪುಷ್ಪಲತಾ ಚಿಕ್ಕಣ್ಣ, ಕಾರ್ಯದರ್ಶಿ ಶಿವಪ್ರಸಾದ್ ಇನ್ನಿತರರು ಹಾಜರಿದ್ದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!