Mysore
14
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

CBSE ನಕಲಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ: ರೂಪ್ಸಾ ಸಂಘಟನೆ ಅಧ್ಯಕ್ಷನ ಬಂಧನ

ಬೆಂಗಳೂರು : ಸಿಬಿಎಸ್‍ಇ ನಕಲಿ ಪ್ರಮಾಣ ಪತ್ರ ಮಾಡಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ರೂಪ್ಸಾ ಸಂಘಟನೆ ಅಧ್ಯಕ್ಷರನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಎಸ್‍ಇ ನಕಲಿ ಪ್ರಮಾಣಪತ್ರ ಸಲ್ಲಿಸಿ ಶಾಲೆ ನಡೆಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ಪೆÇಲೀಸರು ಬಂಸಿ ವಿಚಾರಣೆ ನಡೆಸುತ್ತಿದ್ದಾರೆಂದರು.
ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರು ಒತ್ತಾಯಿಸಿರುವ ಪ್ರಕರಣವನ್ನು ಸಿಬಿಐಗೆ ನೀಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಸಿಬಿಐಗೆ ನೀಡುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಯಾರೂ, ಯಾರನ್ನು ತೇಜೊವಧೆ ಮಾಡಬಾರದು. ಯಾರೇ ಆದರೂ ಕಾನೂನು ಕೈಗೆತ್ತುಕೊಂಡರೆ ಪೆÇಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಚುನಾವಣೆ ಆಯೋಗದ ಸೂಚನೆ ಮೇರೆಗೆ ಸ್ಯಾಂಟ್ರೋ ರವಿ ಕೇಸ್ ತನಿಖಾಕಾರಿಯನ್ನು ನಾವು ವರ್ಗಾವಣೆ ಮಾಡಿಲ್ಲ. ವರ್ಗಾವಣೆ ಆಗಿದೆ. ಚುನಾವಣೆ ಆಯೋಗದ ನಿಯಮ ಕಠಿಣವಾಗಿದೆ. ಈ ನಿಯಮದ ಅಡಿ ವರ್ಗಾವಣೆ ಕ್ರಮ ಆಗಿದೆ ಎಂದು ಮತ್ತೊಂದು ಪ್ರಶ್ನೆಗೆ ಸಚಿವರು ಉತ್ತರಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!