Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

ಫೆ.6ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಜೋಡಿ

ಮುಂಬೈ: ಬಾಲಿವುಡ್‌ನಲ್ಲಿ ಈಗ ಸಾಲು ಸಾಲು ಮದುವೆಯ ಸಂಭ್ರಮ. ಕಳೆದ ತಿಂಗಳಷ್ಟೇ ಕ್ರಿಕೆಟಿಗ ರಾಹುಲ್ ಮತ್ತು ಅಥಿಯಾ ಶೆಟ್ಟಿ ವಿವಾಹವಾಗಿದ್ದರು. ಇದೀಗ ಬಾಲಿವುಡ್ ಕ್ಯೂಟ್‌ ಜೋಡಿ ಎಂದೇ ಕರೆಸಿಕೊಳ್ಳುವ  ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇದೇ 6ರಂದು  ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ರಾಜಸ್ತಾನದ ಜೈಸಲ್ಮೇರ್‌ನಲ್ಲಿರುವ ಐಷಾರಾಮಿ ಸೂರ್ಯಘರ್ ಹೋಟೆಲ್‌ನಲ್ಲಿ ಅದ್ದೂರಿಯಾಗಿ ಈ ಜೋಡಿ ಮದುವೆಯಾಗಲಿದ್ದಾರೆ. ಆತ್ಮೀಯ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರು ಭಾಗಿಯಾಗಲಿದ್ದು, ಫೆಬ್ರುವರಿ 4 ರಿಂದ ವಿವಾಹ ಪೂರ್ವ ಕಾರ್ಯಕ್ರಮಗಳು ಆರಂಭವಾಗಲಿವೆ.

ನಟಿ ಕಿಯಾರಾ ಅಡ್ವಾಣಿ ಮತ್ತು ನಟ ಸಿದ್ಧಾರ್ಥ್ ಮಲ್ಹೋತ್ರಾ ವಿವಾಹವು  ಅವರ ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ. ಕಳೆದ ಸುಮಾರು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಜೊತೆ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಕೊನೆಗೂ ಮದುವೆಯಾಗುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!