Mysore
18
fog

Social Media

ಮಂಗಳವಾರ, 24 ಡಿಸೆಂಬರ್ 2024
Light
Dark

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಕೇರಳ, ತಮಿಳುನಾಡಿನಲ್ಲಿ ಭಾರಿ ಮಳೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.

ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇದೆ. ತಮಿಳುನಾಡು ಮತ್ತು ಕೇರಳ ಭಾಗದಲ್ಲಿ 64.5 ಮಿಮೀ-115.5 ಮಿಮೀ ವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ತಮಿಳುನಾಡು ಮತ್ತು ಪುದುಚೇರಿಯಾದ್ಯಂತ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ