Mysore
23
overcast clouds

Social Media

ಬುಧವಾರ, 14 ಅಕ್ಟೋಬರ್ 2026
Light
Dark

ಶಿಷ್ಯವೇತನ ಬಿಡುಗಡೆಗೆ ಆಗ್ರಹ

ಮೈಸೂರು: ಮೈಸೂರು ವಿವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಜಾಪಾರ್ಟಿ(ರೈತಪರ್ವ) ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ ಆಗ್ರಹಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸುವಾರು 250 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ(ಪಿಎಚ್.ಡಿ) ವಿದ್ಯಾರ್ಥಿಗಳಿದ್ದು, ಸಮಾಜ ಕಲ್ಯಾಣ ಇಲಾಖೆವತಿಯಿಂದ 2022-23 ನೇ ಸಾಲಿನ ಶಿಷ್ಯವೇತನಕ್ಕಾಗಿ ಸುಮಾರು 2.47 ಕೋಟಿ ರೂ. ಹಣ ಇಲಾಖೆ ವತಿಯಿಂದ ಬಿಡುಗಡೆಯಾಗಿದೆ. ಆದರೆ ವಿವಿಯವರು ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸಬೂಬು ಹೇಳಿ ಕಾಲಹರಣ ಮಾಡಿಕೊಂಡು ಬರುತ್ತಿದ್ದಾರೆ. ಕೂಡಲೇ ಶಿಷ್ಯವೇತನ ಬಿಡುಗಡೆ ಮಾಡದಿದ್ದರೆ ಪಕ್ಷದ ವತಿಯಿಂದ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡುವುದಾಗಿ ತಿಳಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ಅಲ್ಪಸಂಖ್ಯಾತರ ಕಾರ್ಯದರ್ಶಿ ಸ್ಟೀಫನ್ ಜೋಸೆಫ್, ಜಿಲ್ಲಾ ಕಾರ್ಮಿಕ ಘಟಕದ ಕಾರ್ಯದರ್ಶಿ ಮಂಜುನಾಥ್, ಎಚ್.ಡಿ.ಕೋಟೆ ತಾಲೂಕು ಹಂಪಾಪುರ ಹೋಬಳಿ ರೈತ ಘಟಕದ ಅಧ್ಯಕ್ಷ ಬೋರೇಗೌಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!