Mysore
25
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗೆ ತರಬೇತಿ

ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗ ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‌ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಆಸಕ್ತರು ಫೆ.8ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ   0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆಎಲ್‌ಎನ್. ಮೂರ್ತಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!