Mysore
20
overcast clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡವರಿಗೆ ಭರ್ಜರಿ ರಿಯಾಯಿತಿ

ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ದಂಡದ ಮೊತ್ತವನ್ನು ಬಾಕಿ ಉಳಿಸಿಕೊಂಡವರಿಗೆ ಭರ್ಜರಿ ರಿಯಾಯಿತಿ ಘೋಷಿಸಲಾಗಿದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಫೆ.೧೧ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ
ಶೇ.೫೦ ಅನ್ನು ರಿಯಾಯಿತಿ ನೀಡಲಾಗಿದ್ದು, ಆದ್ದರಿಂದ ಮೈಸೂರು ನಗರ ಸಂಚಾರ ಪೊಲೀಸರಿಂದ ಸಂಚಾರ ಇ-ಚಲನ್ ಪಡೆದು ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ಈ ಸದಾವಕಾಶವನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ನಗರ ಪೊಲೀಸರು ತಿಳಿಸಿದ್ದಾರೆ.

ಮೈಸೂರು ನಗರದ ಎಲ್ಲ ಸಂಚಾರ ಪೊಲೀಸ್ ಠಾಣೆಗಳಲ್ಲಿ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ, ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್‌ನಲ್ಲಿ. ವಾಹನ ಪರಿಶೀಲನೆ ಮಾಡುವ ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಬಳಿ, ಕರ್ನಾಟಕ ಒನ್ ಮೊಬೈಲ್ ಅಪ್ಲಿಕೇಷನ್‌ನಲ್ಲಿ ದಂಡದ ಮೊತ್ತವನ್ನು ಪಾವತಿ ಮಾಡಬಹುದು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!