Mysore
24
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್‌ ಇನ್ನಿಲ್ಲ

ಪಾಕಿಸ್ತಾನದ ಮಾಜಿ ಅಧ್ಯಕ್ಷ, ನಿವೃತ್ತ ಸೇನಾಧಿಕಾರಿ ಪರ್ವೇಜ್​ ಮುಷರಫ್ ಇಂದು ದುಬೈನಲ್ಲಿ ನಿಧನ ಹೊಂದಿದ್ದಾರೆ.

ದುಬೈ: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್ (79) ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ ಇಂದು ದುಬೈನ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಭ್ರಷ್ಟಾಚಾರ ಆರೋಪ ಹೊತ್ತಿದ್ದ ಇವರು ಪಾಕಿಸ್ತಾನದಿಂದ ಪಲಾಯನಗೊಂಡು ದುಬೈನಲ್ಲಿ ನೆಲೆಸಿದ್ದರು.

. 78 ವರ್ಷದ ಮುಷರಫ್ ಅವರು ಅಮಿಲೋಡೋಸಿಸ್ (Amyloidosis) ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, 2016ರಿಂದ ದುಬೈನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗಷ್ಟೇ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿ ನಗರದಲ್ಲಿರುವ ಆರ್ಮ್ಡ್ ಫೋರ್ಸಸ್ ಇನ್ಸ್​ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ವರ್ಗವಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಪರ್ವೇಜ್ ಮುಷರಫ್ ಬದುಕುಳಿಯುವುದು ಬಹುತೇಕ ಕಷ್ಟ ಎಂದು ಸಾಕಷ್ಟು ಮೊದಲೇ ಗೊತ್ತಾಗಿತ್ತು. ಮುಷರಫ್ ಅವರ ಆರೋಗ್ಯ ಚೇತರಿಕೆ ಕಾಣುವುದು ಸಾಧ್ಯವಾಗುತ್ತಿಲ್ಲ. ಅವರ ಅಂಗಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರ ಕುಟುಂಬ ಸದಸ್ಯರು ಜೂನ್ 10ರಂದು ಹೇಳಿಕೆ ನೀಡಿದ್ದರು.

“ವೆಂಟಿಲೇಟರ್​ನಲ್ಲಿ ಅವರನ್ನು ಇಡಲಾಗಿಲ್ಲ. ಕಳೆದ 3 ವಾರಗಳಿಂದ ಈ ಕಾಯಿಲೆ ತೀವ್ರ ಸ್ವರೂಪ ಪಡೆದಿದ್ದರಿಂದ ಆಸ್ಪತ್ರೆಯಲ್ಲಿದ್ದಾರೆ. ಚೇತರಿಕೆ ಕಾಣದ ಹಂತದಲ್ಲಿ ಅವರಿದ್ದಾರೆ. ಅಂಗಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅವರ ನಿತ್ಯ ಜೀವನ ಸುಗಮವಾಗಿರುವಂತೆ ಪ್ರಾರ್ಥಿಸಿ” ಎಂದು ಕುಟುಂಬದವರು ದೇಶವಾಸಿಗಳಿಗೆ ಮನವಿ ಮಾಡಿದ್ದರು.ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥರಾಗಿದ್ದ ಪರ್ವೇಜ್ ಮುಷರಫ್ 2001ರಿಂದ 2008ರಿಂದ ತಮ್ಮ ದೇಶದ ಅಧ್ಯಕ್ಷರಾಗಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!