Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

ಕೆ.ಆರ್.ಆಸ್ಪತ್ರೆ ನವೀಕರಣ; ಸಹಕರಿಸಲು ಮನವಿ

ಮೈಸೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು 2024ನೇ ಸಾಲಿನಲ್ಲಿ ಶತಮಾನೋತ್ಸವವನ್ನು ಪೂರೈಸುತ್ತಿರುವುದರಿಂದ ಕೆ.ಆರ್.ಆಸ್ಪತ್ರೆ ಹಾಗೂ ಅಧೀನ ಆಸ್ಪತ್ರೆಗಳ ನವೀಕರಣ ಮತ್ತು ದುರಸ್ತಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪ್ರಾರಂಭಗೊಳಿಸಲಾಗುತ್ತಿದೆ.
ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಭೇಟಿ ನೀಡುವ ರೋಗಿಗಳು ಮತ್ತು ಸಾರ್ವಜನಿಕರಿಗೆ ಅವಶ್ಯವಿರುವ ಚಿಕಿತ್ಸೆಗಳ ವಿವರಗಳನ್ನು ಆಸ್ಪತ್ರೆಯ ಆವರಣಗಳಲ್ಲಿ ನಾಮಫಲಕ ಅಳವಡಿಸಲಾಗಿದ್ದು, ದುರಸ್ತಿ ಮತ್ತು ನವೀಕರಣ ಕಾಮಗಾರಿ ಪೂರ್ಣಗೊಳ್ಳುವವರೆಗೂ ಸಹಕರಿಸುವಂತೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!