Mysore
28
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಮಹಿಳಾ ಕಾರ್ಮಿಕರ ಸುರಕ್ಷತೆಗೆ ಕಾನೂನು : ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿಗೆ ವಿಧೇಯಕ ಮಂಡನೆ

ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಗೆ ಸೂಕ್ತ ಸುರಕ್ಷತೆಯೊಂದಿಗೆ 24 ಗಂಟೆಗಳ ಕಾಲ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಕಾರ್ಖಾನೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಈ ವಿಧೇಯಕ ಮಂಡಿಸಿ ದುಡಿಮೆ ಮತ್ತು ಗಳಿಕೆಯಲ್ಲಿ ಸಮಾನತೆ ಮತ್ತು ಸಮಾನ ಅವಕಾಶವನ್ನು ಕಲ್ಪಿಸಿ ಅವಧಿ ಮೀರಿದ ಕೆಲಸಕ್ಕಾಗಿ ಮಹಿಳಾ ಕೆಲಸಗಾರರಿಗೆ ಅನುವು ಮಾಡಿಕೊಡಲು ಮತ್ತು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಂದ ಲಿಖಿತ ಒಪ್ಪಿಗೆಉನ್ನು ಪಡೆಯುವುದರೊಂದಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಸುರಕ್ಷತೆ ಮತ್ತು ಆರೋಗ್ಯವನ್ನು ಭದ್ರಪಡಿಸಲು ಷರತ್ತುಗೊಳಪಟ್ಟು 24 ಗಂಟೆ ಕೆಲಸ ಮಾಡಲು ಮಹಿಳೆಯರನ್ನು ಸಶಕ್ತಗೊಳಿಸುವುದಕ್ಕಾಗಿ ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.
ಜತೆಗೆ ಇನ್ನಷ್ಟು ಆರ್ಥಿಕ ಚಟುವಟಿಕೆಗಳು, ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸಲು ಯಾವುದೇ ವಾರದಲ್ಲಿ ಗರಿಷ್ಠ 48 ಗಂಟೆಗೊಳಪಟ್ಟು ಯಾವುದೇ ದಿನದಲ್ಲಿ ವಿರಾಮ ಮಧ್ಯಂತರಗಳನ್ನೊಳಗೊಂಡಂತೆ ಪ್ರಸ್ತುತದಲ್ಲಿರುವ ಕೆಲಸದ ಗಂಟೆಗಳ ಅವಧಿಯನ್ನು 9 ಗಂಟೆಯಿಂದ 12 ಗಂಟೆಗಳವರೆಗೆ ಹೆಚ್ಚಿಸಲು ಅವಕಾಶ ಕಲ್ಪಿಸುವುದಕ್ಕೆ ಹಾಗೂ ದೈನಂದಿನ ಗರಿಷ್ಠ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾರ್ಖಾನೆಗಳ ಯಾವುದೇ ಗುಂಪು ಅಥವಾ ವರ್ಗ ವಿವರಣೆಗೆ ಕೆಲಸಗಾರನಿಗೆ ಒಟ್ಟು ಕೆಲಸದ ಗಂಟೆಗಳ ಅವಧಿಯನ್ನು ಮಧ್ಯಂತರವಿಲ್ಲದೆ 6 ಗಂಟೆಗಳ ವರೆಗೆ ವಿಸ್ತರಿಸಲು ರಾಜ್ಯಸರ್ಕಾರಕ್ಕೆ ಅವಕಾಶ ಕಲ್ಪಿಸುವುದಕ್ಕೆ ಯಾವುದೇ ವಾರದಲ್ಲಿನ ಅಥವಾ ಯಾವುದೇ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ಸಾಮಾನ್ಯ ದರಕ್ಕಿಂತ ದುಪ್ಪಟ್ಟು ದರದಲ್ಲಿ ಮಜೂರಿಯನ್ನು ಕೆಲಸಗಾರನಿಗೆ ಪಾವತಿಸಬೇಕಾದ ಕೆಲಸದ ವೇಳೆಗಳನ್ನು ನಿಯಮಿಸಲು ಈ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ