Mysore
25
overcast clouds

Social Media

ಬುಧವಾರ, 24 ಜೂನ್ 2026
Light
Dark

ಉದ್ಯಮಿ ಏನ್. ಆರ್.ಜಗದೀಶ್ ಆರಾಧ್ಯ ನಿಧನ

ತುಮಕೂರು: ಉದ್ಯಮಿ, ಲಿಂಗಾಯತ ಸಮುದಾಯದ ಮುಖಂಡ ಎನ್.ಆರ್ ಜಗದೀಶ್ ಆರಾಧ್ಯ (89) ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಗದೀಶ್ ಆರಾಧ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಟಿಜಿಎಂಸಿ ಬ್ಯಾಂಕ್‌ನ ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದರು. ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಚೇತನ ವಿದ್ಯಾ ಮಂದಿರ, ಸರ್ವೋದಯ ಶಾಲೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ನಗರ ಬನಶಂಕರಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಗುರುವಾರ ಸಂಜೆ 4 ಗಂಟೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!