Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್

ಬೆಂಗಳೂರು – ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್ ಆಗಿದೆ. ಏಕೆಂದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ರಾಜ್ಯದ ಆಲ್ಲಿನ ಸ್ಪತ್ರೆಗಳಒಂದು ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ. ಏನೆಂದರೆ, ರಾಜ್ಯದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕು ನಿರೋಧಕ ಲಸಿಕೆಯ ಸಂಗ್ರಹ ತುಂಬಾನೇ ಕಡಿಮೆ ಇದೆ.

ಈ ವಿಚಾರವಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಆದಷ್ಟು ಬೇಗ ರಾಜ್ಯಕ್ಕೆ ಕೋವಿಡ್ ಸೋಂಕು ನಿರೋಧಕ ಲಸಿಕೆಯನ್ನು ರವಾನಿಸುವಂತೆ ಮನವಿ ಮಾಡಿದೆ. ಸೋಮವಾರದ ಅಂಕಿ ಅಂಶಗಳ ಪ್ರಕಾರ ಕರ್ನಾಟಕ ರಾಜ್ಯಾದ್ಯಂತ ಒಟ್ಟು 616 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆ ಒಂದರಲ್ಲೇ 394 ಪ್ರಕರಣಗಳು ಬೆಳಕಿಗೆ ಬಂದಿವೆ.
ಕೊರೊನಾ ಸೋಂಕಿನ ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಕೋವಿಡ್ ಲಸಿಕೆ ಪ್ರಧಾನ ಪಾತ್ರ ವಹಿಸುತ್ತದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಅರ್ಹರಾಗಿರುವ ಫಲಾನುಭವಿಗಳಿಗೆ ಕೂಡಲೇ ಲಸಿಕೆ ನೀಡಲು ಆರೋಗ್ಯ ಇಲಾಖೆ ಕ್ರಮ ವಹಿಸಿದ್ದು, ಇದಕ್ಕಾಗಿ ಹೆಚ್ಚುವರಿ ಲಸಿಕೆ ರವಾನಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ.
ಇದೇ ವಿಚಾರದ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಆರೋಗ್ಯ ಮಿಷನ್ನ ನಿರ್ದೇಶಕ ನವೀನ್ ಭಟ್, ಕೇಂದ್ರ ಸರ್ಕಾರಕ್ಕೆ ನಾವು ಈ ಹಿಂದೆಯೇ ಪತ್ರ ಬರೆದಿದ್ದೆವು. ನಮಗೆ 30 ಲಕ್ಷ ಕೋವಿಡ್ ಲಸಿಕೆ ಡೋಸ್‌ ಗಳು ಬೇಕಿದ್ದು, ಈ ಪೈಕಿ ಕೋವಿಶೀಲ್ಡ್ ಲಸಿಕೆಯೇ 20 ರಿಂದ 25 ಲಕ್ಷ ಡೋಸ್‌ ನಷ್ಟು ಬೇಕಿದೆ ಎಂದು ಬೇಡಿಕೆ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸದ್ಯ 5 ರಿಂದ 10 ಲಕ್ಷ ಡೋಸ್ ಲಸಿಕೆ ಸ್ವೀಕರಿಸಿದ್ದು, ಈ ಸಂಖ್ಯೆಯನ್ನು ಹೆಚ್ಚಳ ಮಾಡಬೇಕಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನು ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕೆ ಪಡೆಯಲು ಸಾರ್ವಜನಿಕರು ಮುಂದಾಗುತ್ತಿಲ್ಲ. ಇದೂ ಕೂಡಾ ಸರ್ಕಾರದ ಎದುರಿಗೆ ಇರುವ ಪ್ರಮುಖ ಸವಾಲಾಗಿದೆ.
ಸದ್ಯದ ಮಟ್ಟಿಗೆ ಅಗತ್ಯ ಇರುವಷ್ಟ ಕೋವಿಡ್ ಲಸಿಕೆಯ ಸಂಗ್ರಹ ನಮ್ಮ ಬಳಿ ಇದೆ ಎಂದು ಖಾಸಗಿ ಆಸ್ಪತ್ರೆ ಹಾಗೂ ನರ್ಸಿಂಗ್ ಹೋಂ ಸಂಘದ ಅಧ್ಯಕ್ಷ ಡಾ. ಗೋವಿಂದಯ್ಯ ಯತೀಶ್ ಅವರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ ಕೋವಿಡ್ ಲಸಿಕೆಗೆ ತುಂಬಾ ಕಡಿಮೆ ಬೇಡಿಕೆ ಇದೆ. ಹೀಗಾಗಿ, ಕಳೆದ 6 ತಿಂಗಳಲ್ಲಿ ಭಾರೀ ಪ್ರಮಾಣದ ಲಸಿಕೆ ವ್ಯರ್ಥವಾಗಿದೆ. ಸದ್ಯ ಸಂಗ್ರಹ ಆಗಿರುವ ಲಸಿಕೆಗಳನ್ನು ಮೂರು ಬಾರಿ ವಾಪಸ್ ಕಳಿಸಲಾಗಿತ್ತು. ಇದೀಗ ಏಪ್ರಿಲ್ 2023ರವರೆಗೆ ನೀಡಬಹುದಾದ ಲಸಿಕೆಗಳ ಸಂಗ್ರಹ ಮಾತ್ರ ಇದೆ ಎಂದು ಮಾಹಿತಿ ಸಿಕ್ಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ