Mysore
15
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ದೇಶದಲ್ಲಿ 24 ಗಂಟೆಗಳಲ್ಲಿ 2,994 ಕೋವಿಡ್ ಪ್ರಕರಣಗಳು ದೃಢ

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ (4,47,18,781).24 ಗಂಟೆಗಳಲ್ಲಿ ಕೋವಿಡ್‌ನಿಂದ 9 ಮಂದಿ ಮೃತಪಟ್ಟಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,876ಕ್ಕೆ ಏರಿದೆ.ದೆಹಲಿ, ಕರ್ನಾಟಕ, ಕೇರಳ ಮತ್ತು ಪಂಜಾಬ್‌ನಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಗುಜರಾತ್‌ನಲ್ಲಿ ಒಬ್ಬರು ಅಸುನೀಗಿದ್ದಾರೆ.
ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.04ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.77ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ ಶೇಕಡ 2.09ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇಕಡ 2.03ರಷ್ಟಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!