Mysore
22
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಅಭಿಮಾನಿಗೆ ಎಚ್ಚರಿಕೆ ನೀಡಿದ ಲೇಡಿ ಸೂಪರ್‌ ಸ್ಟಾರ್ ನಯನತಾರಾ

ಮುಂಬೈ‌ ; ನಟಿ ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ವರ್ತನೆಯಿಂದ ನಟಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದಾರೆ.
ಇತ್ತೀಚಿಗೆ ಕುಂಭಕೋಣಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪಂಗುನಿ ಉತಿರಮ್‌ ಹಬ್ಬದ ಸಂದರ್ಭದಲ್ಲಿ ಈ ದಂಪತಿ ಭಾಗಿಯಾಗಿದ್ದರು.
ಅಭಿಮಾನಿಗಳ ಗುಂಪು ಹೆಚ್ಚಾಗಿತ್ತು. ಅಭಿಮಾನಿಯೊಬ್ಬ ನಯನತಾರಾ ಅವರನ್ನು ಮೊಬೈಲ್‌ ಕ್ಯಾಮರಾದಲ್ಲಿ ಸೆರೆ ಹಿಡಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ತಾಳ್ಮೆ ಕಳೆದುಕೊಂಡ ನಟಿ ಮೊಬೈಲ್‌ ಫೋನ್‌ನನ್ನು ಒಡೆದು ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಘ್ನೇಶ್ ಮತ್ತು ನಯನತಾರಾ ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದುಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!