Mysore
28
overcast clouds

Social Media

ಬುಧವಾರ, 17 ಜೂನ್ 2026
Light
Dark

ಎಎಪಿಗೆ ರಾಷ್ಟ್ರೀಯ ಪಕ್ಷ ಮಾನ್ಯತೆ; ಟಿಎಂಸಿ, ಎನ್‌ಸಿಪಿ, ಸಿಪಿಐಗೆ ಇಲ್ಲ– ಆಯೋಗ

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಮಾಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ), ಶರದ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್ (ಎನ್‌ಸಿಪಿ) ಹಾಗೂ ಸಿಪಿಐ ಪಕ್ಷಗಳು ರಾಷ್ಟ್ರೀಯ ಸ್ಥಾನಮಾನ ಕಳೆದುಕೊಂಡಿವೆ.

ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಮತ್ತು ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.

ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!