ನಂಜನಗೂಡು : ನಂಜನಗೂಡು ತಾಲ್ಲೂಕು ಕಾಂಗ್ರೆಸ್ ವತಿಯಿಂದ ಮಾಜಿ ಸಂಸದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಆರ್.ಆರ್.ಧ್ರುವನಾರಾಯಣ್ ಮತ್ತು ಪತ್ನಿ ವೀಣಾ ಧ್ರುವನಾರಾಯಣ್ ರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.
ನಗರದ ನಂದಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಧ್ರುವನಾರಾಯಣ್ ಮತ್ತು ಅವರ ಪತ್ನಿ ವೀಣಾ ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪುತ್ರ ದರ್ಶನ್ ಹಾಗೂ ಕಾಂಗ್ರೆಸ್ ಮುಖಂಡರು ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಇದೇ ವೇಳೆ ಮಾತನಾಡಿದ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಧ್ರುವ, ನಮ್ಮ ತಂದೆಯ ಸಾವಿನ ಬಳಿಕ ನನ್ನ ತಾಯಿ ಕೂಡ ತೀರಿಕೊಂಡಿದ್ದಾರೆ. ಅವರನ್ನ ಕಳೆದುಕೊಂಡ ನೋವಿನಿಂದ ಆಚೆ ಬರಲು ನನ್ನಿಂದ ಆಗುತ್ತಿಲ್ಲ ಎಂದು ಗಧ್ಗದಿತರಾದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ,ದೊರೆಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು,ನೂರಾರು ಮಂದಿ ಕಾರ್ಯಕರ್ತರು ಹಾಜರಿದ್ದರು.