Mysore
24
broken clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಕಮಲ ತೊರೆದು ʼಕೈʼ ಹಿಡಿದ ಲಕ್ಷ್ಮಣ ಸವದಿ

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಮತ್ತಿತರರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು.

ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಚಂದ್ರಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಎ ಬಿ ಪಾಟೀಲ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಅಕ್ಕಪ್ಪ ಮತ್ತಿತರರು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!