Mysore
28
overcast clouds

Social Media

ಸೋಮವಾರ, 15 ಜೂನ್ 2026
Light
Dark

COVID-19: 10,753 ಹೊಸ ಪ್ರಕರಣ, 27 ಸಾವು

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 10,753 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 53,720ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.

ಒಂದೇ ದಿನ 27 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 5,31,091ಕ್ಕೆ ಏರಿದೆ.

ದೆಹಲಿ, ಕೇರಳದಲ್ಲಿ ತಲಾ 6, ಮಹಾರಾಷ್ಟ್ರದಲ್ಲಿ 4, ರಾಜಸ್ಥಾನದಲ್ಲಿ 3 ಹಾಗೂ ಛತ್ತೀಸ್‌ಗಢ, ಗುಜರಾತ್, ಹರಿಯಾಣ, ಹಿಮಾಚಲಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಉತ್ತರಾಖಂಡ, ಉತ್ತರಪ್ರದೇಶದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇಕಡ 6.78ರಷ್ಟಿದ್ದು, ವಾರದ ಪಾಸಿಟಿವಿಟ ದರ ಶೇಕಡ 4.49ರಷ್ಟಿದೆ.

ಈವರೆಗಿನ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 4.48 ಕೋಟಿ (4,48,08,022) ಆಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!