Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಮೋದಿ ಪದವಿ: ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್‌ ಕೋರ್ಟ್ ಸಮನ್ಸ್

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಹಾನಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್‌ ಅವರಿಗೆ ಇಲ್ಲಿನ ನ್ಯಾಯಾಲಯ ಶನಿವಾರ ಸಮನ್ಸ್‌ ಜಾರಿ ಮಾಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ, ಕೇಜ್ರಿವಾಲ್‌ ಹಾಗೂ ಸಂಜಯ್‌ ಸಿಂಗ್‌ ಅವರು ಮೇ 23ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಿದರು.

ಪ್ರಧಾನಿ ಮೋದಿ ಅವರ ಪದವಿ ಕುರಿತ ಮಾಹಿತಿ ಕೇಳಿದ್ದ ಅರ್ಜಿಗೆ ಸಂಬಂಧಿಸಿ ಗುಜರಾತ್‌ ಹೈಕೋರ್ಟ್‌ ಆದೇಶ ನೀಡಿತ್ತು. ಇದರ ಬೆನ್ನಲ್ಲೇ, ಏಪ್ರಿಲ್‌ 1 ಹಾಗೂ 2 ರಂದು ಕೇಜ್ರಿವಾಲ್‌ ಹಾಗೂ ಸಂಜಯ್‌ ಸಿಂಗ್ ಅವರು ಪತ್ರಿಕಾಗೋಷ್ಠಿ ನಡೆಸಿದ್ದರು. ನಂತರ, ಈ ಇಬ್ಬರ ವಿರುದ್ಧ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪೀಯೂಷ್ ಪಟೇಲ್ ಅವರು ಏಪ್ರಿಲ್ 12ರಂದು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!