Mysore
29
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಕಾಗೇರಿ ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಜಗದೀಶ್ ಶೆಟ್ಟರ್

ಶಿರಸಿ: ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ ಜೊತೆಗೂಡಿ ಬಂದ ಶೆಟ್ಟರ್ ಕಾಗೇರಿ ಜೊತೆ ಕೆಲ ಸಮಯ ಚರ್ಚಿಸಿ ನಂತರ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ನಡೆಸಿದ ಸಂಧಾನ ವಿಫಲವಾದ ಕಾರಣ ಶೆಟ್ಟರ್ ರಾಜೀನಾಮೆ ಸಲ್ಲಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!