Mysore
21
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ಬಿಜೆಪಿ ಮುಖಂಡನ ಬರ್ಬರ ಹತ್ಯೆ : ಆಸ್ಪತ್ರೆಗೆ ಪ್ರಲ್ಹಾದ್ ಜೋಶಿ ಭೇಟಿ

ಹುಬ್ಬಳ್ಳಿ : ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.

ಪ್ರವೀಣ ಕಮ್ಮಾರ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಚಿಕಿತ್ಸೆಗಾಗಿ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಅಸುನೀಗಿದ್ದಾರೆ. ದೂರು ದಾಖಲಿಸಿಕೊಂಡಿರುವ ಗರಗ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ.

ಇನ್ನು ಕೋಟೂರ ಗ್ರಾಮ ಪಂಚಾಯತಿ ಉಪಾಧ್ಯಕ್ಷನ ಹತ್ಯೆ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್ ಭೇಟಿ ನೀಡಿದರು.ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದ ಪ್ರವೀಣ ಕೊಲೆ ಹಿನ್ನಲೆ ಗ್ರಾಮದಲ್ಲಿ ಹೆಚ್ಚಿನ ಬಂದೋಬಸ್ತ್ ನೀಡಲು ಸಹ ಸೂಚನೆ ನೀಡಲಾಗಿದೆ. ಇದರಿಂದಾಗಿ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದ್ದುಈ ಹಿನ್ನೆಲೆ ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತಿಗೆ ಅಧಿಕಾರಿಗಳು ನೇತೃತ್ವ ವಹಿಸಿದ್ದಾರೆ.

ಇನ್ನು ಧಾರವಾಡ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ ಹತ್ಯೆ ಯಾದ ತಕ್ಷಣ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶವಾಗಾರಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಪ್ರಹ್ಲಾದ್ ಜೋಶಿ ಗೆ ಶಾಸಕ ಅಮೃತ್ ದೇಸಾಯಿ ಇತರರು ಸಾಥ್ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!