Mysore
26
broken clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಬಿಸಿಲ ತಾಪದಿಂದ 14 ಜನ ಸಾವು : ಮಹಾರಾಷ್ಟ್ರದಲ್ಲಿ ಸಿಎಂ ಶಿಂದೆ ಸರ್ಕಾರ ವಜಾಕ್ಕೆ ಆಗ್ರಹ

ಮುಂಬೈ : ಮಹಾರಾಷ್ಟ್ರ ಭೂಷಣ್‌ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ತಾಪ ತಾಳಲಾರದೇ 14 ಜನರು ಪ್ರಾಣ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಏಕನಾಥ ಶಿಂದೆ ಸರ್ಕಾರವನ್ನು ವಜಾಗೊಳಿಸಬೇಕು ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ರಾಜ್ಯಪಾಲ ರಮೇಶ್‌ ಬೈಸ್‌ ಅವರನ್ನು ಒತ್ತಾಯಿಸಿದ್ದಾರೆ.

ಮುಂಬೈನ ಖಾರ್‌ಘರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರು ಮೃತಪಟ್ಟಿರುವ ಬಗ್ಗೆ ಟ್ವಿಟರ್‌ನಲ್ಲಿ ವಾಗ್ದಾಳಿ ನಡೆಸಿರುವ ಅವರು, ‘ಇವು ಕಾಲ್ತುಳಿತದಿಂದ ಸಂಭವಿಸಿದ ಸಾವೇ? ಸರ್ಕಾರ ಏನನ್ನು ಮುಚ್ಚಿಡಲು ಯತ್ನಿಸುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ಇದರೊಂದಿಗೆ ಕಾರ್ಯಕ್ರಮದ ವಿಡಿಯೊವನ್ನು ಲಗತ್ತಿಸಿದ್ದಾರೆ. ಅದರಲ್ಲಿ ಜನರು ತೀವ್ರ ಬಳಲಿರುವ, ನಿತ್ರಾಣಗೊಂಡಿರುವ ದೃಶ್ಯವಿದೆ.

‘ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಸರ್ಕಾರವನ್ನು ವಜಾ ಮಾಡಬೇಕು’ ಎಂದು ಆಗ್ರಹ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!